- Get link
- X
- Other Apps
Posts
Showing posts from April, 2017
- Get link
- X
- Other Apps
ಒಂದು ದಿನ ಸಾಕ್ರಟಿಸ್ ಏಕಾಂಗಿಯಾಗಿ ತಮ್ಮ ಮನೆ ಅಂಗಳದಲ್ಲಿ ನಡೆದಾಡುತ್ತಿದ್ದಾಗ ಅವನಿಗೆ ಸ್ನೇಹಿತನೊಬ್ಬ, ‘ಸಾಕ್ರಟಿಸ್, ನಿಮ್ಮ ಶಿಷ್ಯನೊಬ್ಬನ ಬಗ್ಗೆ ನಾನೊಂದು ವಿಷಯ ಕೇಳಿದೆ, ಆ ಸಂಗತಿ ನಿನಗೆ ಗೊತ್ತಿದೆಯಾ?’ ಎಂದು ಕೇಳಿದ. ಅದಕ್ಕೆ ಸಾಕ್ರಟಿಸ್, "ಒಂದು ನಿಮಿಷ ತಾಳು, ನೀನು ಆ ವಿಷಯ ಹೇಳುವ ಮೊದಲು ನಿನಗೊಂದು ಮೂರು ಹಂತದ ಪರೀಕ್ಷೆಯೊಡ್ಡುತ್ತೇನೆ. ನನ್ನ ಶಿಷ್ಯನ ಬಗ್ಗೆ ಹೇಳುವ ಮೊದಲು ಈ ಪರೀಕ್ಷೆಗೆ ನಿನ್ನನ್ನು ಒಳಪಡಿಸುವೆ" ಎಂದ. ಅದಕ್ಕೆ ಆತ ಒಪ್ಪಿಕೊಂಡ. ‘ಮೊದಲ ಹಂತ ಅಂದ್ರೆ #ಸತ್ಯ. ಅಂದರೆ ನೀನು ನನ್ನ ಶಿಷ್ಯನ ಬಗ್ಗೆ ಹೇಳುವ ಸಂಗತಿ ಸತ್ಯ ಎಂಬುದು ನಿನಗೆ ಮನವರಿಕೆಯಾಗಿರಬೇಕು, ಆಯಿತಾ?’ ಎಂದ ಸಾಕ್ರಟೀಸ್. ಅದಕ್ಕೆ ಸ್ನೇಹಿತ ‘ಅದು ಸತ್ಯ ಹೌದೋ, ಅಲ್ಲವೋ ಎಂಬುದು ನನಗೆ ಗೊತ್ತಿಲ್ಲ. ನನಗೆ ಯಾರೋ ಹೇಳಿದರು. ನಾನು ಅದನ್ನು ಕೇಳಿದೆ ಅಷ್ಟೆ’ ಎಂದ. ಅವನ ಮಾತಿಗೆ ಸಾಕ್ರಟಿಸ್, ‘ಹೌದಾ? ಆದರೆ ನೀನು ಹೇಳೋದು ಸತ್ಯವೋ, ಸುಳ್ಳೋ ಎಂಬುದು ನಿನಗೆ ಗೊತ್ತಿಲ್ಲ ಅಂತಾಯಿತು. ಪರವಾಗಿಲ್ಲ ಬಿಡು. ಹಾಗಾದರೆ ಈಗ ಎರಡನೆ ಹಂತದ ಪರೀಕ್ಷೆ. ಇದು #Goodness ಪರೀಕ್ಷೆ. ಅಂದರೆ ನನ್ನ ಶಿಷ್ಯನ ಬಗ್ಗೆ ನೀನು ಹೇಳಲಿರುವ ಮಾತು ಒಳ್ಳೆಯದೋ, ಕೆಟ್ಟದ್ದೋ?’ ಎಂದು ಕೇಳಿದ. ಅದಕ್ಕೆ ಸ್ನೇಹಿತ, ‘ಇಲ್ಲ…ಇಲ್ಲ… ಅದು ಒಳ್ಳೆಯ ವಿಷಯವಲ್ಲ’ ಎಂದ. ‘ಅಂದರೆ ನೀನು ನನ್ನ ಶಿಷ್ಯನ ಬಗ್ಗೆ ಹೇಳಲಿರುವ ಸಂಗತಿ ಕೆಟ್ಟದ್ದು ಅಂತಾಯಿತು. ಅಂದ...